ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ

Spread the love

ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ *ಗೌರವಾನ್ವಿತ ಶ್ರೀ ಯೋಗೇಶ ಎಂ.ಆರ್.* ಅವರು ಗಿಡಕ್ಕೆ ನೀರು ಹಾಕುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಿಗೆರೆ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ *ಶ್ರೀ ಬಿ. ಮಹೇಶ್* ಅವರು ವಹಿಸಿದ್ದರು.

ವೇದಿಕೆಯಲ್ಲಿ ಮೂಡಿಗೆರೆ ವಕೀಲರ ಸಂಘದ ಅಧ್ಯಕ್ಷರಾದ *ಶ್ರೀ ಹೆಚ್.ಕೆ. ರಘು,.* ಹಾಗೂ ವಕೀಲರ ಸಂಘದ ಕಾರ್ಯದರ್ಶಿಗಳಾದ *ಶ್ರೀಮತಿ ಅರ್ಪಿತ ಕೆ.ಎಸ್.* ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಪ್ರಸ್ತುತ ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಶಿಕ್ಷಣ ಮತ್ತು ಕಾನೂನಿನ ಪಾತ್ರದ ಬಗ್ಗೆ ಮಾತನಾಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಸರ್ಕಾರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು

.

ವರದಿ: ಕಿರಣ್ ಬೆಟ್ಟಗೆರೆ

Leave a Reply

Your email address will not be published. Required fields are marked *

Back To Top