Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ

Spread the love

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರಿಂದ ಅಹವಾಲು ಸ್ವೀಕಾರ
ಮೂಡಿಗೆರೆ, ಆ.4: ಮೆಸ್ಕಾಂ ಮೂಡಿಗೆರೆ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವತಿಯಿಂದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಗಸ್ಟ್ 6, 2026 (ಗುರುವಾರ) ರಂದು ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಸಭೆಯು ಬೆಳಿಗ್ಗೆ 11:00 ಗಂಟೆಗೆ ಮೂಡಿಗೆರೆ ಮೆಸ್ಕಾಂ ಕಚೇರಿಯಲ್ಲಿ ನಡೆಯಲಿದೆ. ವಿದ್ಯುತ್ ಸಂಪರ್ಕ, ವಿದ್ಯುತ್ ಬಿಲ್, ಹೊಸ ಸಂಪರ್ಕ, ಟ್ರಾನ್ಸ್‌ಫಾರ್ಮರ್, ವಿದ್ಯುತ್ ಲೈನ್ ದೋಷ, ಕಡಿಮೆ ವೋಲ್ಟೇಜ್, ಪದೇಪದೇ ವಿದ್ಯುತ್ ವ್ಯತ್ಯಯ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಗ್ರಾಹಕರು ತಮ್ಮ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಮಂಡಿಸಬಹುದು.
ಸಾರ್ವಜನಿಕರು ಹಾಗೂ ಮೆಸ್ಕಾಂ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ತಿಳಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ

Leave a Reply

Your email address will not be published. Required fields are marked *

Back To Top