
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರಿಂದ ಅಹವಾಲು ಸ್ವೀಕಾರ
ಮೂಡಿಗೆರೆ, ಆ.4: ಮೆಸ್ಕಾಂ ಮೂಡಿಗೆರೆ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವತಿಯಿಂದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಗಸ್ಟ್ 6, 2026 (ಗುರುವಾರ) ರಂದು ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಸಭೆಯು ಬೆಳಿಗ್ಗೆ 11:00 ಗಂಟೆಗೆ ಮೂಡಿಗೆರೆ ಮೆಸ್ಕಾಂ ಕಚೇರಿಯಲ್ಲಿ ನಡೆಯಲಿದೆ. ವಿದ್ಯುತ್ ಸಂಪರ್ಕ, ವಿದ್ಯುತ್ ಬಿಲ್, ಹೊಸ ಸಂಪರ್ಕ, ಟ್ರಾನ್ಸ್ಫಾರ್ಮರ್, ವಿದ್ಯುತ್ ಲೈನ್ ದೋಷ, ಕಡಿಮೆ ವೋಲ್ಟೇಜ್, ಪದೇಪದೇ ವಿದ್ಯುತ್ ವ್ಯತ್ಯಯ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಗ್ರಾಹಕರು ತಮ್ಮ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಮಂಡಿಸಬಹುದು.
ಸಾರ್ವಜನಿಕರು ಹಾಗೂ ಮೆಸ್ಕಾಂ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ತಿಳಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ


