ಅರಣ್ಯ ಕಾವಲುಗಾರನೇ ಭೂ ಒತ್ತುವರಿದಾರ? ಜೇನುಬೈಲ್ ಗ್ರಾಮಸ್ಥರ ಗಂಭೀರ ಆರೋಪ
ಮೂಡಿಗೆರೆ, ಜೂ.22: ಅಕ್ರಮವಾಗಿ ನಿರ್ಮಿಸಿರುವ ವಾಣಿಜ್ಯಮಳಿಗೆ ಹಾಗೂ ಅರಣ್ಯ ಭೂಮಿ ತೆರವುಗೊಳಿಸಬೇಕು: ಜೇನುಬೈಲ್ ಗ್ರಾಮಸ್ಥರು ತಾಲೂಕಿನ ಜೇನಬೈಲ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಚರ್‌ವೋರ್ವರು ಅಕ್ರಮವಾಗಿ ವಾಣಿಜ್ಯ ಕಟ್ಟಡ ನಿರ್ಮಿಸಿದ್ದು ಅದನ್ನು ತೆರವುಗೊಸಬೇಕೆಂದು ಜೇನುಬೈಲ್ ಗ್ರಾಮಸ್ಥ ತಾರೇಶ್ ಒತ್ತಾಯಿಸಿದರು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ಮಾಡುತ್ತಿರುವ ಉದಯ್ ಎಂಬುವರು ಜೇನುಬೈಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಹಳೆ ಕಟ್ಟಡ ದುರಸ್ತಿಪಡಿಸುವುದಾಗಿ […]
**ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ**
**ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ** ಮೂಡಿಗೆರೆ, ಜೂನ್ 20: ಟಾಟಾ ಪವರ್ ಕಂಪನಿಯು ವಿದ್ಯುತ್ ವಿತರಣಾ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅದನ್ನು ವಿರೋಧಿಸಿ ಮೂಡಿಗೆರೆ ಮೆಸ್ಕಾಂ ಉಪವಿಭಾಗದ ಕಚೇರಿ ಎದುರು ಕೆಪಿಟಿಸಿಎಲ್/ಎಸ್ಕಾಂ ನೌಕರರ ಸಂಘ, ಅಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರು ಸಂಯುಕ್ತವಾಗಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬಾರದು ಹಾಗೂ […]
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಪ್ರವೀಣ್ ಪೂಜಾರಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರತೆ, ಗೌರವ ಮತ್ತು ನಂಬಿಕೆಗೆ ಧಕ್ಕೆ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜಸೇವಕ ಪ್ರವೀಣ್ ಪೂಜಾರಿ ಆಗ್ರಹಿಸಿದ್ದಾರೆ. “ಒಬ್ಬ ಮಹಿಳೆಯ ಹೆಸರನ್ನು ಮುಂದಿಟ್ಟುಕೊಂಡು ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ನಿರಾಧಾರ ಆರೋಪಗಳನ್ನು ಹರಿಬಿಡುವುದು ಖಂಡನೀಯ. ಸತ್ಯಾಂಶಗಳಿಗಿಂತ ಸಂಚಲನ ಸೃಷ್ಟಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನಗಳ ಹಿಂದೆ […]
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ
ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು […]
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸ
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸಕೊಟ್ಟಿಗೆಹಾರ:ಪದ್ಮಶ್ರೀ ಪ್ರಶಸ್ತಿ ವಿಜೇತ ಖ್ಯಾತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್‍ಅವರು ಜೂನ್ 13 ರಂದು ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಕಲಿಕೆಗೆ ಸವಾಲು, ನಿರ್ವಹಣೆ ಮತ್ತುಪರಿಹಾರ ಈ ವಿಷಯವಾಗಿ ಉಪನ್ಯಾಸ ಮತ್ತು ಸಂವಾದ ನಡೆಸಿಕೊಡಲಿದ್ದಾರೆ ಎಂದು ಚಿಕ್ಕಮಗಳೂರಿನಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಕೆ.ಸಿ ಶಂಕರ್ ತಿಳಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಆಧುನಿಕ, ಯಾಂತ್ರಿಕ ವಾತಾವರಣದಲ್ಲಿ ಮಾನಸಿಕ ಒತ್ತಡನಿರ್ವಹಣೆಯು ಸುಗಮ ಕಲಿಕೆಗೆ ತುಂಬಾ ಮುಖ್ಯ. ಕಲಿಕಾ ಪ್ರಕ್ರಿಯೆಯಲ್ಲಿ ಪಾಲುದಾರರಾದ ಶಿಕ್ಷಕರುಮತ್ತು […]
ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರ ನಿಂದನೆ ಖಂಡನೀಯ: ಪುನೀತ್ ಕಡಿದಾಳು
ಮೂಡಿಗೆರೆ: ಪತ್ರಕರ್ತರು ಸಮಾಜದ ಆಸ್ತಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಪತ್ರಕರರಿಗೆ ನೋವುಂಟು ಮಾಡುವ ಪದ ಬಳಕೆ ಸಹಿಸಲ್ಲ ಎಂದು ಯುವ ಪತ್ರಕರ್ತ ಪುನೀತ್ ಕಡಿದಾಳು ತಿಳಿಸಿದ್ದಾರೆ. ವಿಶ್ವ ಕರ್ಮ ಕುಟುಂಬ ಎಂಬ ವಾಟ್ಸ್ ಆಪ್ ಗುಂಪಿನಲ್ಲಿ ವ್ಯಕ್ತಿಯೋರ್ವ ಪತ್ರಕರ್ತರು ಬರೆದ ಸುದ್ದಿಯನ್ನು ಸುಳ್ಳು ಸುದ್ದಿ ಎಂದು ಬಿಂಬಿಸಿದಲ್ಲದೆ ಇಂತಹ ಪತ್ರಕರ್ತರು ಸಮಾಜಕ್ಕೆ ದುರಂತ ಎಂದು ಬರೆದು ಅವಮಾನಿಸಿದ ಹಿನ್ನಲೆ ಇಂತಹ ಕಿಡಿಗೇಡಿಗಳು ಸಮಾಜಕ್ಕೆ ಮಾರಕ ಎಂದರು ತಮ್ಮ ಕುಟುಂಬದ ಕೆಲಸ ಬಿಟ್ಟು ಸಮಾಜಕ್ಕಾಗಿ ದುಡಿಯುತ್ತಿರುವ ಪತ್ರಕರ್ತರ […]
ಸರ್ವೇ ಸ್ಕೆಚ್‌ಗೆ ₹20 ಸಾವಿರ ಲಂಚ ಬೇಡಿಕೆ: ಮೂಡಿಗೆರೆಯ ಸರ್ಕಾರಿ ಸರ್ವೇಯರ್ ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು : ಸರ್ವೇ ಸ್ಕೆಚ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ – ಸರ್ಕಾರಿ ಸರ್ವೇಯರ್ ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಎ.ಡಿ.ಎಲ್.ಆರ್. ಕಚೇರಿಯಲ್ಲಿ ಸರ್ವೇ ಸ್ಕೆಚ್ ಮಾಡಿಕೊಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸರ್ಕಾರಿ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೇವವೃಂದ ಗ್ರಾಮದ ಮಂಜುನಾಥ್ ಎಂಬುವವರ ಜಮೀನಿನ ಸರ್ವೇ ನಡೆಸಿ ಸ್ಕೆಚ್ ನೀಡಲು ಸರ್ಕಾರಿ ಸರ್ವೇಯರ್ ಸುಮಾ ಅವರು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಜುನಾಥ್ ಅವರು ಲೋಕಾಯುಕ್ತಕ್ಕೆ ದೂರು […]
ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರಿಗೆ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಎಚ್ಚರಿಕೆ
ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ, ಕೊಟ್ಟಿಗೆಹಾರ, ಜೂನ್ 10: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಪ್ರವಾಸಿಗರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಮತ್ತು ದಟ್ಟ ಮಂಜಿನಿಂದ ದೃಶ್ಯತೆ ಕಡಿಮೆಯಾಗುತ್ತಿರುವ ಕಾರಣ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿ ಘಾಟಿ ರಸ್ತೆಯ ತಡೆಗೋಡೆಯ ಸಮೀಪ […]
ಜನರ ಜೀವ ಹಿಂಡುವ ಆಡಳಿತ ಬೇಡ: ಕಾಂಗ್ರೆಸ್ ವಿರುದ್ಧ ವಿನಯ್ ಹಳೆಕೋಟೆ ಕಿಡಿ
ಮೂಡಿಗೆರೆ, ಜೂ.೯:ಕಾಂಗ್ರೆಸ್ ದುರಾಡಳಿತದಿಂದ ತಾಲೂಕಿನ ಜನರು ತತ್ತರಿಸಿಹೋಗಿದ್ದಾರೆ: ವಿನಯ್ ಹಳೆಕೋಟೆ ಆಡಳಿತ ಪಕ್ಷಗಳು ರೈತರ ಹಾಗೂ ಜನರ ಹಿತ ಕಾಪಾಡುವ ಕೆಲಸಮಾಡಬೇಕೆ ಹೊರತು, ಜನರ ಜೀವ ಹಿಂಡುವ ಕೆಲಸ ಮಾಡಬಾರದೆಂದು ಬಿಜೆಪಿವಕ್ತಾರ ವಿನಯ ಹಳೆಕೋಟೆ ಆರೋಪಿಸಿದ್ದಾರೆ.ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದನAತರ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ. ರಸ್ತೆ ಅಭಿವೃದ್ಧಿ, ಅತಿವೃಷ್ಟಿಪರಿಹಾರ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೆ ತಿಲಾಂಜಲಿ ಇಟ್ಟಂತಾಗಿದೆ. ಇದರಿಂದತಾಲೂಕಿನಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಪ್ರಮುಖವಾಗಿ ಈ ಹಿಂದೆತಾಲೂಕಿನಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾವಿರಾರು […]
ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಿ: ಶೌರ್ಯ ವಿಪತ್ತು ಘಟಕಕ್ಕೆ ಕರೆ
ಮೂಡಿಗೆರೆ, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಲುಶೌರ್ಯ ವಿಪತ್ತು ಘಟಕದ ತುರ್ತು ಸಭೆ ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪವನ್ನು ಸಮರ್ಥವಾಗಿಎದುರಿಸಲು ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ಸದಾಸನ್ನದ್ಧರಾಗಿರಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕು ಯೋಜನಾ ಕಚೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದಶೌರ್ಯ ವಿಪತ್ತು ಘಟಕದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರು.ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ರಸ್ತೆ, ಮನೆ, ಗುಡ್ಡ ಕುಸಿತ ಸೇರಿದಂತೆನಾನಾ ರೀತಿಯ ಸಮಸ್ಯೆಗಳು […]

